ತೂಕ ಹೆಚ್ಚಳ ಸಮಸ್ಯೆಗೆ ನೈಸರ್ಗಿಕ ಪಾನೀಯಗಳು ಸಹಾಯ ಮಾಡುತ್ತವೆ. ಬ್ಯುಸಿ ಶೆಡ್ಯೂಲ್ ನಡುವೆ ತೂಕ ಹೆಚ್ಚಳ ಸಮಸ್ಯೆ ಜನರಲ್ಲಿ ಸಾಮಾನ್ಯ ವಿಚಾರ. ಇದಕ್ಕೆ ಮುಖ್ಯ ಕಾರಣ ಅನಾರೋಗ್ಯಕರ ಜೀವನಶೈಲಿ ಮತ್ತು ತಪ್ಪಾದ ಆಹಾರ ಪದ್ಧತಿ. ನೀವು ಸಹ ತೂಕ ಹೆಚ್ಚಳ ಸಮಸ್ಯೆಯಿಂದ ಪರದಾಡುತ್ತಿದ್ದರೆ, ಈ ಬಗ್ಗೆ ಚಿಂತಿಸುವ ಅಗತ್ಯವಿಲ್ಲ.
ಕೆಲವು ನೈಸರ್ಗಿಕ ಪಾನೀಯಗಳನ್ನು ಕುಡಿಯುವ ಮೂಲಕ ನಿಮ್ಮ ದೇಹದ ತೂಕವನ್ನು ಇಳಿಸಿಕೊಳ್ಳಬಹುದಾಗಿದೆ. ಅಲ್ಲದೇ ಈ ಪಾನೀಯಗಳು ತೂಕ ಇಳಿಸಿಕೊಳ್ಳಲು ಸಹಾಯ ಮಾಡುವುದಲ್ಲದೇ, ಜೀರ್ಣಕ್ರಿಯೆಯನ್ನು ಸುಧಾರಿಸಲು ಮತ್ತು ದೇಹವನ್ನು ನಿರ್ವಿಷಗೊಳಿಸಲು ಸಹಾಯ ಮಾಡುತ್ತದೆ. ಹಾಗಾದರೆ ಆ ನೈಸರ್ಗಿಕ ಪಾನೀಯಗಳ ಬಗ್ಗೆ ತಿಳಿಯೋಣ ಬನ್ನಿ.
ಅಲೋವೆರಾ ಜ್ಯೂಸ್:
ಅಲೋವೆರಾ ಜ್ಯೂಸ್ನಲ್ಲಿ ಕಂಡು ಬರುವ ಉತ್ಕರ್ಷಣ ನಿರೋಧಕಗಳು ಮತ್ತು ಜೀರ್ಣಕಾರಿ ಕಿಣ್ವಗಳು ಜೀರ್ಣಕ್ರಿಯೆಯನ್ನು ಸುಧಾರಿಸಲು ಮತ್ತು ಚಯಾಪಚಯ ಕ್ರಿಯೆಯನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ. ಈ ಜ್ಯೂಸ್ ಅನ್ನು ಪ್ರತಿದಿನ ಕುಡಿಯುವುದರಿಂದ ಹೊಟ್ಟೆ ಉಬ್ಬರ ಮತ್ತು ಕೊಲೆಸ್ಟ್ರಾಲ್ ಕಡಿಮೆ ಆಗುತ್ತದೆ.
ದಾಲ್ಚಿನ್ನಿ ನೀರು:
ಪ್ರತಿದಿನ ಬೆಳಿಗ್ಗೆ ಒಂದು ಲೋಟ ನೀರಿನಲ್ಲಿ ದಾಲ್ಚಿನ್ನಿ ಪುಡಿಯನ್ನು ಬೆರೆಸಿ ಕುಡಿಯುವುದರಿಂದ ರಕ್ತದಲ್ಲಿನ ಸಕ್ಕರೆ ಪ್ರಮಾಣ ನಿಯಂತ್ರಣಗೊಳ್ಳುತ್ತದೆ ಮತ್ತು ಚಯಾಪಚಯ ಕ್ರಿಯೆ ಹೆಚ್ಚಾಗುತ್ತದೆ, ಇದು ತೂಕ ಇಳಿಸಿಕೊಳ್ಳಲು ಸಹಾಯ ಮಾಡುತ್ತದೆ.
ನೆಲ್ಲಿಕಾಯಿ ಜ್ಯೂಸ್:
ನೆಲ್ಲಿಕಾಯಿ ವಿಟಮಿನ್ ಸಿಯಿಂದ ಸಮೃದ್ಧವಾಗಿದ್ದು, ಇದು ರೋಗನಿರೋಧಕ ಶಕ್ತಿ ಮತ್ತು ಚಯಾಪಚಯ ಕ್ರಿಯೆಯನ್ನು ಹೆಚ್ಚಿಸುತ್ತದೆ. ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ಇದನ್ನು ಕುಡಿಯುವುದರಿಂದ ಜೀರ್ಣಕ್ರಿಯೆ ಸುಧಾರಿಸುತ್ತದೆ, ದೇಹವನ್ನು ನಿರ್ವಿಷಗೊಳಿಸುತ್ತದೆ ಮತ್ತು ಕೊಲೆಸ್ಟ್ರಾಲ್ ಬರ್ನ್ ಮಾಡಲು ನೆಲ್ಲಿಕಾಯಿ ಸಹಾಯಕವಾಗಿದೆ.
ನಿಂಬೆ ನೀರು:
ವಿಟಮಿನ್ ಸಿ ಯಿಂದ ಸಮೃದ್ಧವಾಗಿರುವ ನಿಂಬೆಹಣ್ಣನ್ನು ಬೆಚ್ಚಗಿನ ನೀರಿಗೆ ಬೆರೆಸಿ ಕುಡಿಯುವುದರಿಂದ ಇದು ಚಯಾಪಚಯ ಕ್ರಿಯೆಯನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ. ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ಇದನ್ನು ಕುಡಿಯುವುದರಿಂದ ಕೊಲೆಸ್ಟ್ರಾಲ್ ಬರ್ನ್ ಆಗುವುದಷ್ಟೇ ಅಲ್ಲದೇ, ದೇಹದಿಂದ ಇದು ವಿಷವನ್ನು ಹೊರಹಾಕುತ್ತದೆ.
ಮೆಂತ್ಯ ನೀರು:
ಮೆಂತ್ಯ ಕಾಳುಗಳನ್ನು ರಾತ್ರಿಯಿಡೀ ನೆನೆಸಿ ಬೆಳಗ್ಗೆ ಕುಡಿದರೆ, ಇವು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸುತ್ತವೆ. ಜೊತೆಗೆ ಹಸಿವನ್ನು ಕಡಿಮೆ ಮಾಡುತ್ತವೆ ಮತ್ತು ಚಯಾಪಚಯ ಕ್ರಿಯೆಯನ್ನು ಹೆಚ್ಚಿಸುತ್ತವೆ. ಪ್ರತಿದಿನ ಇದನ್ನು ಕುಡಿಯುವುದರಿಂದ ತೂಕ ನಿಯಂತ್ರಿಸಲು ಸಹಾಯ ಮಾಡುತ್ತದೆ.
ಜೀರಿಗೆ ನೀರು:
ತೂಕ ಇಳಿಸಿಕೊಳ್ಳಲು ಜೀರಿಗೆ ನೀರು ಅತ್ಯುತ್ತಮ ಪಾನೀಯಗಳಲ್ಲಿ ಒಂದಾಗಿದೆ. ರಾತ್ರಿಯಿಡೀ ಜೀರಿಗೆಯನ್ನು ನೀರಿನಲ್ಲಿ ನೆನೆಸಿಟ್ಟು ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ಕುಡಿದರೆ, ಇದು ಕೊಬ್ಬನ್ನು ಬರ್ನ್ ಮಾಡಲು ಮತ್ತು ಹೊಟ್ಟೆ ಉಬ್ಬರವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ.